ಚಾಮರಾಜನಗರ: ಅರ್ಚಕರಿಗೆ ಆರೋಗ್ಯ ವಿಮೆ ಮತ್ತು ಜೀವ ವಿಮೆ ಒದಗಿಸುವ ಯೋಜನೆಯನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಅರ್ಚಕರಿಗೆ ಜೀವ ವಿಮೆ ಮತ್ತು ಆರೋಗ್ಯ ವಿಮೆ ಒದಗಿಸುವ ಯೋಜನೆ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ ಅವರು, ಕೊರೋನಾ ಕಾರಣದಿಂದ ಸ್ಥಗಿತವಾಗಿರುವ ಸಪ್ತಪದಿ ಯೋಜನೆ ಶೀಘ್ರವೇ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.