ಬೆಂಗಳೂರು: ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ವಿಶ್ವನಾಥ್ ಇದುವರೆಗೂ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಬಿಡಿಎ ಅಧ್ಯಕ್ಷರಾಗಿ ನೇಮಿಸಲಾಗಿತ್ತು.