ಗೋವಾ: ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರ ಸಹೋದರ ಬಿ.ಕೆ. ಶಿವಕುಮಾರ್ ಪುತ್ರಿ ಡಾ. ಹಿತಾ ಅವರ ಮದುವೆ ಇಂದು ಗೋವಾದ ಲೀಲಾ ಪ್ಯಾಲೇಸ್ ರೆಸಾರ್ಟ್ ನಲ್ಲಿ ನಡೆಯಲಿದೆ.
ಮದುವೆ ಪೂರ್ವಭಾವಿ ಶಾಸ್ತ್ರಗಳು ಅದ್ದೂರಿಯಾಗಿ ನಡೆದಿದ್ದು, ಇಂದು ನಡೆಯಲಿರುವ ಮದುವೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೋವಾದಲ್ಲಿ ಉಳಿದುಕೊಂಡಿದ್ದು ಅವರು ಕೂಡ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
https://www.facebook.com/Laxmihebbalkarofficial/posts/1814515102036850