ನವದೆಹಲಿ: ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಮಾಸಾಶನ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ರಾಜ್ಯದಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆ ಮಾಸಾಶನವನ್ನು ಸ್ಥಗಿತಗೊಳಿಸಿಲ್ಲ. ಬೋಗಸ್ ಫಲಾನುಭವಿಗಳನ್ನು ಪತ್ತೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಮಾಸಾಶನ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಮಾಸಾಶನ ವಿತರಣೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಅಂಚೆ ಕಚೇರಿಗಳಲ್ಲಿಯೂ ಪಿಂಚಣಿ ತಡವಾಗಿ ವಿತರಣೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದು, ಇದನ್ನು ತಪ್ಪಿಸಲು ಬೋಗಸ್ ಫಲಾನುಭವಿಗಳ ಪತ್ತೆ ಕಾರ್ಯ ನಡೆಸಲಾಗಿದೆ. ನೇರವಾಗಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಿಂಚಣಿ ಹಣ ಜಮಾ ಮಾಡಲಾಗುವುದು. ಶೇಕಡ 98 ರಷ್ಟು ಮಾಸಾಶನ ಫಲಾನುಭವಿಗಳ ಪಿಂಚಣಿ ಮತ್ತು ಬ್ಯಾಂಕ್ ಖಾತೆಗಳನ್ನು ಆಧಾರ್ ನೊಂದಿಗೆ ಜೋಡಣೆ ಮಾಡಲಾಗಿದೆ. ಆನ್ಲೈನ್ ಮೂಲಕ ಪಿಂಚಣಿ ತಲುಪಿಸಲಾಗುತ್ತದೆ ಎಂದು ಹೇಳಿದ್ದಾರೆ.