ಬೆಂಗಳೂರು: ರಾಜ್ಯದಲ್ಲಿ ಆನ್ ಲೈನ್ ಕ್ಲಾಸ್ ಸ್ಥಗಿತ ಮಾಡುವುದಿಲ್ಲ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಸ್ಪಷ್ಟಪಡಿಸಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ.
ಇಲಾಖೆ, ಖಾಸಗಿ ಶಾಲೆಗಳ ಒಕ್ಕೂಟಗಳ ಸಭೆ ಬಳಿಕ ಮಾತನಾಡಿದ ಅನ್ಬುಕುಮಾರ್, ಖಾಸಗಿ ಶಾಲೆಗಳು ಆನ್ ಲೈನ್ ತರಗತಿಗಳನ್ನು ಮುಂದುವರಿಸಲು ಒಪ್ಪಿವೆ. ಶುಲ್ಕ ಪಾವತಿ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ ವಿದ್ಯಾರ್ಥಿಗಳಿಗೆ ಈ ಬಗ್ಗೆ ಯಾವುದೇ ತೊಂದರೆ ನೀಡುವಂತಿಲ್ಲ ಎಂದು ಹೇಳಿದರು.
ಇನ್ನು ಖಾಸಗಿ ಶಾಲಾ ಒಕ್ಕೂಟ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಪೋಷಕರಿಂದ ಶುಲ್ಕ ಪಡೆಯುವ ಬಗ್ಗೆ ನಿರ್ಬಂಧ ವಿಧಿಸದಂತೆ ಒತ್ತಾಯಿಸಿದೆ. ಸರ್ಕಾರಿ ಶಾಲೆ ಸೇರಿದಂತೆ ಎಲ್ಲರಿಗೂ ಕೋವಿಡ್ ಪರಿಹಾರವನ್ನು ಸರ್ಕಾರ ಘೋಷಿಸಿದೆ. ಈ ನಿಟ್ಟಿನಲ್ಲಿ ಖಾಸಗಿ ಶಾಲೆಗಳಿಗೆ ತಾರತಮ್ಯ ಸರಿಯಲ್ಲ ಖಾಸಗಿ ಶಾಲೆಗಳು ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಸರ್ಕಾರದ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.