ನವದೆಹಲಿ: ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲಾಗುತ್ತದೆ. ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ವಿಶ್ವದಲ್ಲೇ ಮೊದಲ ಬಾರಿಗೆ ರಷ್ಯಾ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್ ವಿ ಲಸಿಕೆ 2021 ರಿಂದ ಭಾರತದಲ್ಲಿ ರೆಡಿಯಾಗಲಿದೆ.
ಹೆಟೆರೋ ಫಾರ್ಮಸ್ಯುಟಿಕಲ್ ಕಂಪನಿ ಸಹಯೋಗದಲ್ಲಿ 100 ಮಿಲಿಯನ್ ಡೋಸ್ ಲಸಿಕೆಯನ್ನು ಉತ್ಪಾದಿಸಲಾಗುತ್ತದೆ. ಆಗಸ್ಟ್ 11 ರಂದು ಮೊದಲ ಬಾರಿಗೆ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ರಷ್ಯಾ ಹೇಳಿದ್ದು, ಈಗಾಗಲೇ ರಷ್ಯಾದಲ್ಲಿ ಲಸಿಕೆಯನ್ನು ನೀಡಲಾಗ್ತಿದೆ.
ಗಮಾಲೆಯ ನ್ಯಾಷನಲ್ ರಿಸರ್ಚ್ ಸೆಂಟರ್ ನಲ್ಲಿ ಲಸಿಕೆ ಅಭಿವೃದ್ಧಿಪಡಿಸಲಾಗುತ್ತಿದೆ. ರಷ್ಯಾದ ಆರೋಗ್ಯ ಸಚಿವಾಲಯದ ಸಂಶೋಧನಾ ಕೇಂದ್ರದಲ್ಲಿ ಅಭಿವೃದ್ಧಿಪಡಿಸಲಾದ ಲಸಿಕೆಯನ್ನು ಭಾರತದಲ್ಲಿಯೂ ಉತ್ಪಾದಿಸಲಾಗುವುದು ಎಂದು ಹೇಳಲಾಗಿದೆ.