ಪಡಿತರ ಚೀಟಿ ಹೊಂದಿರುವವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಈವರೆಗೆ ಪ್ರತಿ ಸದಸ್ಯರಿಗೆ ನೀಡುತ್ತಿದ್ದ 10 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಲಾಗುತ್ತಿದ್ದು, ಇದರ ಜೊತೆಗೆ ಕಡಲೆಕಾಳಿಗೂ ಕೊಕ್ ಬೀಳುವ ಸಾಧ್ಯತೆ ಇದೆ.
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ತಿಂಗಳಿನಿಂದ ರಾಜ್ಯ ಸರ್ಕಾರ ನೀಡುತ್ತಿದ್ದ ಅನ್ನಭಾಗ್ಯ ಯೋಜನೆಯ 5 ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಇದೀಗ ಕೇಂದ್ರ ಸರ್ಕಾರ ತನ್ನ ಯೋಜನೆಯ ಅಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿದೆ ಎನ್ನಲಾಗಿದೆ.
ಹೀಗಾಗಿ ಡಿಸೆಂಬರ್ ತಿಂಗಳಿನಿಂದ ರಾಜ್ಯದ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿಯ ಬದಲು 5 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. 5 ಕೆಜಿ ಅಕ್ಕಿಯ ಜೊತೆಗೆ 2 ಕೆಜಿ ಗೋಧಿ ಸಹ ನೀಡಲಾಗುತ್ತದೆ.