ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗತೊಡಗಿದೆ ನಿವಾರ್ ಚಂಡಮಾರುತದ ಪರಿಣಾಮದಿಂದ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಅನೇಕ ಕಡೆ 4 ಡಿಗ್ರಿವರೆಗೂ ತಾಪಮಾನ ಇಳಿಕೆಯಾಗಿದೆ.
ದಕ್ಷಿಣ ಒಳನಾಡಿನಲ್ಲಿ 6 ಡಿಗ್ರಿವರೆಗೂ ತಾಪಮಾನ ಕಡಿಮೆಯಾಗಿದೆ. ಇದರಿಂದಾಗಿ ಹಲವು ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ರಾಜ್ಯಾದ್ಯಂತ ಇನ್ನು ಮೂರು ದಿನಗಳ ಕಾಲ ಚಳಿಯ ವಾತಾವರಣ ಇರುತ್ತದೆ.
ಮಲೆನಾಡು ಸೇರಿದಂತೆ ಹಲವೆಡೆ ಮಂಜು ಮುಸುಕಿದ ವಾತಾವರಣ ಕಂಡುಬಂದಿದ್ದು, ಜನ ಬೆಚ್ಚನೆಯ ಉಡುಪುಗಳ ಮೊರೆ ಹೋಗಿದ್ದಾರೆ. ಅಲ್ಲಲ್ಲಿ, ಬೆಂಕಿ ಹಾಕಿ ಮೈ ಕಾಯಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ. ವಾಕ್ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ‘ಬಿಸಿ’ ಪಾನೀಯಗಳಿಗೆ ಬೇಡಿಕೆ ಹೆಚ್ಚಾಗಿದೆ.