ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು.
ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವ್ಯಾಪ್ತಿಯ ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ವಾಯುಮಾಲಿನ್ಯ ಪರೀಕ್ಷಣಾ ಕೇಂದ್ರಗಳಲ್ಲಿ ನವೆಂಬರ್ 30 ರಂದು ಬೆಳಿಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ ವಾಹನಗಳ ಉಚಿತ ಪರೀಕ್ಷೆ ನಡೆಸಿ ಪ್ರಮಾಣ ಪತ್ರ ನೀಡಲಾಗುವುದು.
ಕೇಂದ್ರ ಮೋಟಾರು ವಾಹನ ಅಧಿನಿಯಮದ ಪ್ರಕಾರ ಬಿಎಸ್ 3 ಮಾಪನ ವಾಹನಗಳಿಗೆ ಆರು ತಿಂಗಳು ಹಾಗೂ ಬಿಎಸ್ 4 ವಾಹನಗಳಿಗೆ ಒಂದು ವರ್ಷದ ಅವಧಿಗೆ ಮಾಲಿನ್ಯ ನಿಯಂತ್ರಣ ಹೊಂದಿರುವ ಕುರಿತು ಪ್ರಮಾಣ ಪತ್ರ ನೀಡಲಾಗುವುದು. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹೇಳಿದ್ದಾರೆ.