ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 11 ಗಂಟೆಗೆ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಮೂಲಕ ವಿವಿಧ ವಿಚಾರಗಳನ್ನು ಪ್ರಧಾನಿ ಮೋದಿ ಹಂಚಿಕೊಳ್ಳಲಿದ್ದಾರೆ. ಬಾನುಲಿ ಕಾರ್ಯಕ್ರಮದಲ್ಲಿ ದೇಶದ ಜನರಿಗೆ ಉಚಿತವಾಗಿ ಕೊರೋನಾ ಲಸಿಕೆ ನೀಡುವ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ. ದೇಶದಲ್ಲಿ ಅನೇಕ ಕಂಪನಿಗಳು ಕೊರೋನಾ ಲಸಿಕೆ ಅಭಿವೃದ್ದಿಪಡಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಲಸಿಕೆ ಜನರಿಗೆ ನೀಡಲು ಸಿದ್ಧವಾಗಿರುವ ಕುರಿತಾಗಿ ಮಾಹಿತಿ ಪಡೆದಿರುವ ಅವರು ‘ಮನ್ ಕಿ ಬಾತ್’ನಲ್ಲಿ ಲಸಿಕೆಯನ್ನು ದೇಶದ ಜನರಿಗೆ ನೀಡುವ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.