ಮುಂಬೈ: ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ನಟಿ ಊರ್ಮಿಳಾ ಮಾತೋಂಡ್ಕರ್ ಕಾಂಗ್ರೆಸ್ ಪಕ್ಷದಿಂದ ದೂರವಾಗಿದ್ದರು.
ಐದೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ದೂರವಾಗಿದ್ದ ಅವರು ಮತ್ತೊಂದು ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಮಿತ್ರ ಪಕ್ಷ ಶಿವಸೇನೆಗೆ ಸೇರ್ಪಡೆಯಾಗಲಿದ್ದಾರೆ. ನವೆಂಬರ್ 30 ರಂದು ಊರ್ಮಿಳಾ ಮಾತೋಂಡ್ಕರ್ ಶಿವಸೇನೆ ಸೇರಲಿದ್ದಾರೆ.
2019 ರ ಮಾರ್ಚ್ ನಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು ಮುಂಬೈ ಉತ್ತರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲು ಕಂಡಿದ್ದರು. 5 ತಿಂಗಳ ಬಳಿಕ ಪಕ್ಷದಿಂದ ದೂರವಾಗಿದ್ದರು. ಈಗ ಶಿವಸೇನೆಗೆ ಸೇರಲಿದ್ದಾರೆ ಎನ್ನಲಾಗಿದೆ.