ನಿವಾರ್ ಸೈಕ್ಲೋನ್ ಎಫೆಕ್ಟ್ ರಾಜ್ಯದಲ್ಲಿ ಆಗಿದ್ದು ಗೊತ್ತೇ ಇದೆ. ಅತ್ತ ತಮಿಳುನಾಡು, ಪಾಂಡಿಚೆರಿ ಸೇರಿದಂತೆ ಹಲವಾರು ಭಾಗಗಳಲ್ಲಿ ಎಡಬಿಡದೆ ಸುರಿದ ಮಳೆಗೆ ಜನ ತತ್ತರಿಸಿ ಹೋಗಿದ್ದರು. ಇದೀಗ ಮತ್ತೆ ಚಂಡಮಾರುತದ ಭೀತಿ ಎದುರಾಗಿದೆ.
ಹೌದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇತ್ತ ಅರಬ್ಬೀ ಸಮುದ್ರದಲ್ಲಿಯೂ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 36 ಗಂಟೆಯೊಳಗೆ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 1 ರಿಂದ 4ನೇ ತಾರೀಕಿನವರೆಗೂ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಎಲ್ಲಾ ರಾಜ್ಯಗಳಿಗೂ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಚದುರಿದ ಅಥವಾ ತುಂತುರು ಮಳೆಯಾಗಲಿದೆ.