ಬೆಂಗಳೂರು: ಲೋಕಲ್ ವಾರ್ ಎಂದೇ ಕರೆಯಲಾಗುವ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಡಿಸೆಂಬರ್ 22 ಹಾಗೂ ಡಿಸೆಂಬರ್ 27ರಂದು 2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ.
ಒಟ್ಟು 5762 ಗ್ರಾಮ ಪಂಚಾಯಿತಿಗಳಿದ್ದು, ಕೋವಿಡ್ ನಿಯಮ ಪಾಲನೆ ಕಡ್ಡಾಯವಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದ್ದು, ಕೆಲವೆಡೆ ಇವಿಎಂ ಹಾಗೂ ಕೆಲವೆಡೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುತ್ತಿದೆ. ಡಿಸೆಂಬರ್ 30ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.