ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಎರಡು ದಿನದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕುರಿತು ಸುಳಿವು ನೀಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿರುವುದಕ್ಕೂ ಸಚಿವ ಸಂಪುಟ ವಿಸ್ತರಣೆಗೆ ಯಾವುದೇ ಸಮಸ್ಯೆ ಇಲ್ಲ. ಈ ವಿಚಾರದಲ್ಲಿ ಇನ್ನೆರಡೇ ದಿನ ಕಾದು ನೋಡಿ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಇನ್ನೆರಡು ದಿನ ಕಾದು ನೋಡಿ. ಗ್ರಾಮ ಪಂಚಾಯಿತಿ ಚುನಾವಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.