alex Certify ಗುಡ್ ನ್ಯೂಸ್: ಗ್ರಾಮ ಪಂಚಾಯ್ತಿಗಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಗ್ರಾಮ ಪಂಚಾಯ್ತಿಗಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ

ರಾಮನಗರ: ಪ್ರತಿ ಗ್ರಾಮ ಪಂಚಾಯಿತಿಗಳಿಗೆ ವಾರ್ಷಿಕ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ವಿಕೇಂದ್ರೀಕರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿ ಗ್ರಾಮ ಪಂಚಾಯಿತಿಗೆ ವಾರ್ಷಿಕ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. 15 ನೇ ಹಣಕಾಸು ಆಯೋಗದ ವರದಿಯಲ್ಲಿ ಗ್ರಾಮಪಂಚಾಯಿತಿಗಳಿಗೆ ನೇರವಾಗಿ ಹೆಚ್ಚು ಅನುದಾನ ನೀಡುವ ಪ್ರಸ್ತಾಪವಿದೆ. ಗ್ರಾಮೀಣಾಭಿವೃದ್ಧಿಗೆ ಅಗತ್ಯವಾದ ಎಲ್ಲಾ ಹಣಕಾಸು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಗ್ರಾಮಗಳ ಯೋಜನೆ ಅನುಷ್ಠಾನದ ಹೊಣೆಯನ್ನು ಗ್ರಾಮಪಂಚಾಯಿತಿಗಳಿಗೆ ವಹಿಸಲಾಗುತ್ತದೆ. ನರೇಗಾ ಯೋಜನೆ ಅನುಷ್ಠಾನದ ಹೊಣೆಯನ್ನು ಗ್ರಾಮ ಪಂಚಾಯಿತಿಗೆ ವಹಿಸಲಿದ್ದು, ಆದರ್ಶ ಗ್ರಾಮಗಳನ್ನು ನಿರ್ಮಾಣ ಮಾಡಲಾಗುವುದು. ರಸ್ತೆ, ಶೌಚಾಲಯ, ಆರೋಗ್ಯ, ಶಿಕ್ಷಣ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...