alex Certify BREAKING NEWS: ಇಂದಿರಾ, ಸೋನಿಯಾ, ಪ್ರಿಯಾಂಕಾ ಕ್ರಾಸ್ ಬೀಡಾ…? ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕೆಂಡಾಮಂಡಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಂದಿರಾ, ಸೋನಿಯಾ, ಪ್ರಿಯಾಂಕಾ ಕ್ರಾಸ್ ಬೀಡಾ…? ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕೆಂಡಾಮಂಡಲ

ಶಿವಮೊಗ್ಗ: ಲವ್ ಜಿಹಾದ್ ಕಾಯ್ದೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ಹಿಂದೂಗಳ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಲವ್ ಜಿಹಾದ್ ವಿಚಾರದಲ್ಲಿ ಸಿದ್ದರಾಮಯ್ಯ ಕ್ರಾಸ್ ಬೀಡ್ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯನವರಿಗೆ ಹೆಣ್ಣುಮಕ್ಕಳು, ಮೊಮ್ಮಗಳು ಇಲ್ಲ. ಅದಕ್ಕೆ ಅವರಿಗೆ ನೋವು ಅರ್ಥವಾಗಲ್ಲ. ಇಂದಿರಾ ಗಾಂಧಿ, ಸೋನಿಯಾ, ಪ್ರಿಯಾಂಕಾ ಕ್ರಾಸ್ ಬೀಡಾ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಇಂತಹ ಪದ ಬಳಕೆ ಮಾಡಲು ನಾಚಿಕೆಯಾಗಬೇಕು. ಅವರು ಕಾಂಗ್ರೆಸ್ ನಲ್ಲಿರಲು ಅಯೋಗ್ಯರು. ಹೆಣ್ಣೆಂದರೆ ಕೇವಲ ಕಾಮದ ವಸ್ತು ಎಂದುಕೊಂಡಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮುದಿ ಹಸುವನ್ನು ಏನು ಮಾಡಬೇಕು ಎಂದು ಸಿದ್ದರಾಮಯ್ಯ ಕೇಳಿದ್ದಾರೆ. ನಿಮ್ಮ ತಾಯಿಗೆ ವಯಸ್ಸಾಗಿದೆ ಎಂದು ಏನು ಮಾಡುತ್ತೀರಿ? ಗೋವು ನಮಗೆ ತಾಯಿ ಸಮಾನ ಎಂದು ಈಶ್ವರಪ್ಪ ತಿರುಗೇಟು ನೀಡಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...