ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಸಚಿವಾಲಯವು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನ ಕಟ್ಟುನಿಟ್ಟುಗೊಳಿಸಿದೆ.
ಮುಂದಿನ ವರ್ಷದಿಂದ ನಿಮ್ಮ ವಾಹನವು ಪಿಯುಸಿ ಪ್ರಮಾಣ ಪತ್ರ ಹೊಂದಿಲ್ಲದ್ದಿದ್ದರೆ ನಿಮ್ಮ ವಾಹನದ ನೋಂದಣಿ ಪ್ರಮಾಣಪತ್ರವನ್ನ ಮುಟ್ಟುಗೋಲು ಹಾಕುವ ಸಾಧ್ಯತೆ ಇದೆ.
ರಸ್ತೆ ಸಾರಿಗೆ ಸಚಿವಾಲಯ ಈ ಕರಡು ಅಧಿಸೂಚನೆಯನ್ನ ಹೊರಡಿಸಿದೆ. ಹಾಗೂ ಈ ಅಧಿಸೂಚನೆ ಜಾರಿ ಕುರಿತಂತೆ ತಜ್ಞರಿಂದ ಸಲಹೆ ಕೇಳಿದೆ.