ಹುಣಸೆ ಹಣ್ಣನ್ನು ಅಡುಗೆಯಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಅಷ್ಟು ಮಾತ್ರವಲ್ಲ ಇದರಿಂದ ಆರೋಗ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು.
ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ, ಫೈಬರ್ ಹೇರಳವಾಗಿ ಕಂಡುಬರುತ್ತದೆ. ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.
ಇದರಿಂದ ತೂಕವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಅಲ್ಲದೇ ಇದು ಜೀರ್ಣ ಕ್ರಿಯೆ, ಮಲಬದ್ಧತೆ, ಊತಗಳಂತಹ ಅನೇಕ ಸಮಸ್ಯೆಗಳಿಂದ ನಮ್ಮನ್ನು ದೂರವಿರಿಸುತ್ತದೆ. ಅಲ್ಲದೇ ಇದು ಕೊಬಲೆಸ್ಟ್ರಾಲ್ ನ್ನು ನಿಯಂತ್ರಣದಲ್ಲಿಡುವುದರಿಂದ ಹೃದಯಕ್ಕೆ ಬಹಳ ಉತ್ತಮ.
ಹಾಗಾಗಿ ಒಂದು ಲೋಟ ನೀರಿಗೆ ಬೀಜ ತೆಗೆದು ತೊಳೆದ ಹುಣಸೆ ಹಣ್ಣನ್ನು ಹಾಕಿ 10 ನಿಮಿಷಗಳ ಕಾಲ ಕುದಿಸಿ. ಬಳಿಕ ಹುಣಸೆ ಹಣ್ಣಿನ ರಸ ತೆಗೆದು ಅದು ತಣ್ಣಗಾದ ಬಳಿಕ ಇದಕ್ಕೆ ಜೇನುತುಪ್ಪ ಸೇರಿಸಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ.