ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದ ಇಬ್ಬರು ಎನ್ ಸಿ ಬಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ, ಕಾಮಿಡಿಯನ್ ಭಾರ್ತಿ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರೀಷ್ಮಾ ಅವರ ಕುರಿತು ಸೂಕ್ತ ತನಿಖೆ ನಡೆಸದೇ ನಿರ್ಲಕ್ಷ್ಯ ಮೆರೆದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಎನ್ ಸಿ ಬಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.