ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್, ತಮ್ಮ ಹೊಸ ರಾಜಕೀಯ ಪಕ್ಷ ಸ್ಥಾಪನೆ, ತಮಿಳುನಾಡು ಚುನಾವಣೆ ಸ್ಪರ್ಧೆ ಬಗ್ಗೆ ಇದ್ದ ಗೊಂದಲಗಳಿಗೆ ಕೊನೆಗೂ ತೆರೆ ಎಳೆದಿದ್ದು, ಡಿಸೆಂಬರ್ 31ರಂದು ತಮ್ಮ ಪಕ್ಷವನ್ನು ಲಾಂಚ್ ಮಾಡುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಜನಿಕಾಂತ್, ಹೊಸ ವರ್ಷಕ್ಕೆ ತಮ್ಮ ಪಕ್ಷ ಸ್ಥಾನೆಯಾಗಲಿದೆ. 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾವು ಸ್ಪರ್ಧಿಸಲಿದ್ದು, ಜನ ಬೆಂಬಲದೊಂದಿಗೆ ಗೆಲ್ಲುವುದಾಗಿ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಹೊಸ ರಾಜಕೀಯ ಪರ್ವ ಆರಂಭವಾಗಲಿದ್ದು, ಜನರಿಗೆ ಉತ್ತಮ ಆಡಳಿತ ನಿಡುವುದೇ ನಮ್ಮ ಗುರಿಯಾಗಿದೆ. ನಾನು ನಡೆದು ಬಂದ ದಾರಿ ಬಗ್ಗೆ ನನಗೆ ನಂಬಿಕೆಯಿದೆ. ಹಾಗಾಗಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ನನಗಿದೆ. ನಾನು ರಾಜಕೀಯಕ್ಕೆ ಬರುವುದಾಗಿ ಈ ಹಿಂದೆಯೇ ಹೇಳಿದ್ದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಸ್ವಲ್ಪ ವಿಳಂಬವಾಗಿದೆ. ಇದೀಗ ಅಂತಿಮವಾಗಿ ಹೊಸ ಪಕ್ಷ ಸ್ಥಾಪಿಸುತ್ತಿದ್ದು ಸಂತಸ ತಂದಿದೆ ಎಂದು ಹೇಳಿದರು.