ಬೆಂಗಳೂರು: ತಮಿಳರು ಕೂಡ ರಾಜ್ಯದಲ್ಲಿ 10 ವರ್ಷಗಳಿಂದ ಇದ್ದಾರೆ. ಹಾಗಾಗಿ ಅವರು ಕನ್ನಡಿಗರಾಗುತ್ತಾರೆ. ತಮಿಳರು ಕೇಳಿದರೂ ಕೂಡ ಅವರ ಹೆಸರಲ್ಲಿ ಅಭಿವೃದ್ಧಿ ಪ್ರಾಧಿಕಾರ ಮಾಡುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.
ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ನಾಳೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಪ್ರತಿಕ್ರಿಯಿಸಿರುವ ಅಶ್ವತ್ಥನಾರಾಯಣ, ತಮಿಳರು ಕೇಳಿದರೂ ಅಭಿವೃದ್ಧಿ ನಿಗಮ ಮಾಡುತ್ತೇವೆ. ಮರಾಠರು ಹಲವು ವರ್ಷಗಳಿಂದ ನಮ್ಮ ನಾಡಿನಲ್ಲಿದ್ದಾರೆ. ಹಾಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಲಾಗಿದೆ ಎಂದರು.