ಬೆಂಗಳೂರು: ನಟಿಯರಾದ ಸಂಜನಾ ಗರ್ಲಾನಿ ಮತ್ತು ರಾಗಿಣಿ ದ್ವಿವೇದಿ ಅವರ ಹೇರ್ ಸ್ಯಾಂಪಲ್ ಪಡೆಯಲು ಕೋರ್ಟ್ ನಿಂದ ಅನುಮತಿ ನೀಡಲಾಗಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ರಾಗಿಣಿ ಮತ್ತು ಸಂಜನಾ ಅವರು ಹೇರ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದರು. ನ್ಯಾಯಾಲಯದ ಮೊರೆ ಹೋಗಿದ್ದ ಸಿಸಿಬಿ ಅಧಿಕಾರಿಗಳು ಕೂದಲು ಸ್ಯಾಂಪಲ್ ಪಡೆಯಲು ಅನುಮತಿ ಕೋರಿ ಮನವಿ ಮಾಡಿದ್ದು, ಇದಕ್ಕೆ ಕೋರ್ಟ್ ಅನುಮತಿ ನೀಡಿದೆ ಎಂದು ಹೇಳಲಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ನಟಿಯರು ಸುಮಾರು ಮೂರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕೋರ್ಟ್ ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ರೂ ಇಬ್ಬರಿಗೂ ಜಾಮೀನು ಸಿಕ್ಕಿಲ್ಲ.