alex Certify BIG NEWS: ಸಿಎಂ ಯಡಿಯೂರಪ್ಪ ಹೋದಲ್ಲೆಲ್ಲಾ ಪ್ರತಿಭಟನೆ; ಕರವೇ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಯಡಿಯೂರಪ್ಪ ಹೋದಲ್ಲೆಲ್ಲಾ ಪ್ರತಿಭಟನೆ; ಕರವೇ ಎಚ್ಚರಿಕೆ

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವೆಡೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ನಡುವೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ನಾರಾಯಣ ಗೌಡ ನೇತೃತ್ವದಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣ ಗೌಡ, ನಮ್ಮ ಪ್ರತಿಭಟನೆ ಇಂದಿಗೆ ಸೀಮಿತವಾಗಿಲ್ಲ, ಮರಾಠಾ ನಿಗಮ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸುತ್ತೇವೆ. ಸಿಎಂ ಯಡಿಯೂರಪ್ಪ ಹೋದಲ್ಲೆಲ್ಲ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಎಲ್ಲಾ ತಾಲೂಕು ಕೇಂದ್ರ, ಜಿಲ್ಲಾ ಕೇಂದ್ರಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದು, 30 ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಸುತ್ತೇವೆ. ಮರಾಠಾ ನಿಗಮ ವಾಪಸ್ ಪಡೆಯುವವರೆಗೂ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...