ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಧಿಕಾರವಾಗಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತಾಗಿ ಅನಗತ್ಯ ಹೇಳಿಕೆ ನೀಡಬಾರದು. ಒಂದು ವೇಳೆ ಅನಗತ್ಯವಾಗಿ ಹೇಳಿಕೆ ನೀಡಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಂಪುಟ ವಿಸ್ತರಣೆ ಬಗ್ಗೆ ಕೆಲವರು ನೋವು ವ್ಯಕ್ತಪಡಿಸಿದ್ದಾರೆ. ಆದರೆ, ಯಾರೂ ಅನಗತ್ಯ ಹೇಳಿಕೆ ನೀಡಬಾರದು. ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು. ಯಡಿಯೂರಪ್ಪನವರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.