ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಸಾಬೀತಾದಂತಿದೆ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಶಾಸಕರು ಸರ್ಕಾರದ ವಿರುದ್ಧ ದೂರುಗಳ ಪಟ್ಟಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬಿಜೆಪಿ ಶಾಸಕರು, ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದ್ದು, ಸಭೆಯಲ್ಲಿ ಸರ್ಕಾರದ ವಿರುದ್ಧ ಅಸಮಾಧಾನ ಸ್ಫೋಟಗೊಂಡಿದೆ. ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆ ಕೊರತೆಯಿದೆ. ನಿಗಮ ಮಂಡಳಿ ನೇಮಕಾತಿ ಬಗ್ಗೆಯೂ ಅಸಮಾಧಾನವಿದೆ. ಸರ್ಕಾರ ತೆಗೆದುಕೊಳ್ಳುವ ಪ್ರಮುಖ ನಿರ್ಧಾರಗಳ ಬಗ್ಗೆ ಶಾಸಕರು, ಸಚಿವರ ಜೊತೆ ಯಾವುದೇ ಚರ್ಚೆಯನ್ನು ನಡೆಸಲ್ಲ. ಅಲ್ಲದೇ ಆಡಳಿತದಲ್ಲಿ ಸಿಎಂ ಬಿ.ಎಸ್.ವೈ. ಪುತ್ರ ಬಿ.ವೈ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆಯೂ ಶಾಸಕರು ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.
ಶಾಸಕಾಂಗ ಪಕ್ಷದ ಸಭೆಯನ್ನೇ ಕರೆಯದೇ ನಿರ್ಧಾರಗಳನ್ನು ಕೈಗೊಳ್ಳುತ್ತಿರುವ ಸರ್ಕಾರದ ತೀರ್ಮಾನಗಳ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.