ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಅನೇಕ ರಾಜಕೀಯ ಪಕ್ಷಗಳು, ಸಂಘಟನೆಗಳು ಬೆಂಬಲ ನೀಡಿವೆ.
ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ, ಆಫೀಸರ್ಸ್ ಯೂನಿಯನ್, ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಮೊದಲಾದ ಸಂಘಟನೆಗಳು ಕೂಡ ರೈತರ ಪರವಾಗಿ ನಿಂತಿದ್ದು, ಬ್ಯಾಂಕ್ ಸೇವೆಯಲ್ಲಿ ವ್ಯತ್ಯವಾಗುವ ಸಾಧ್ಯತೆ ಇದೆ.
ಕಾರ್ಮಿಕ, ಸಾರಿಗೆ ಸಂಘಟನೆಗಳು ಬೆಂಬಲ ನೀಡಿರುವುದರಿಂದ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಶಿವಸೇನೆ, ಎನ್ಸಿಪಿ, ರಾಷ್ಟ್ರೀಯ ಜನತಾದಳ, ಸಮಾಜವಾದಿಪಕ್ಷ ಮೊದಲಾದ ಪಕ್ಷಗಳು ಬಂದ್ ಗೆ ಬೆಂಬಲ ನೀಡಿದ್ದು ಅನೇಕ ರಾಜ್ಯಗಳಲ್ಲಿ ಬಂದ್ ಯಶಸ್ವಿಯಾಗುವ ಸಾಧ್ಯತೆ ಇದೆ.
ಬ್ಯಾಂಕ್ ನೌಕರರ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿರುವುದರಿಂದ ನಾಳೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗಬಹುದು. ಹಣ ವಿತ್ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮೊದಲಾದ ನಿಮ್ಮ ಯಾವುದೇ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಲಾಗಿದೆ.