alex Certify ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಇಳಿಕೆ, ಇಂದು 998 ಜನರಿಗೆ ಹೊಸದಾಗಿ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಇಳಿಕೆ, ಇಂದು 998 ಜನರಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 998 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 8,94,004 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 11 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ರಾಜ್ಯದಲ್ಲಿ 11,867 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 8,57,351 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 24,767 ಮಂದಿಗೆ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 501 ಜನರಿಗೆ ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,74,525 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇವತ್ತು 7 ಜನ ಸೋಂಕಿತರು ಬಲಿಯಾಗಿದ್ದು, ಇದುವರೆಗೆ 4190 ಜನ ಮೃತಪಟ್ಟಿದ್ದಾರೆ. 3,51,065 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಂತ ಮತ್ತು 19,269 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...