ನಿನ್ನೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. 15ನೇ ತಾರೀಖಿನವರೆಗೂ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಮಾಡಿತ್ತು. ಆದರೆ ಇದೀಗ ನಾಲ್ಕೇ ದಿನಕ್ಕೆ ಕಲಾಪ ಕಡಿತಕ್ಕೆ ತೀರ್ಮಾನ ಮಾಡಲಾಗಿದೆ. ಸದನ ಕಲಾಪ ಸಮಿತಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.
ಹೌದು, ಇಂದು ಅಧಿವೇಶನದ ನಡುವೆ ಸದನ ಕಲಾಪ ಸಲಹಾ ಸಮಿತಿ ಸಭೆ ನಡೆಸಲಾಯ್ತು. ಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾನೂನು ಸಚಿವ ಮಾಧುಸ್ವಾಮಿ, ಡಿಸಿಎಂ ಗೋವಿಂದ ಕಾರಜೋಳ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಸಚಿವ ಕೆ.ಎಸ್. ಈಶ್ವರಪ್ಪ ಭಾಗಿಯಾಗಿದ್ದರು.
ಸಭೆ ಬಳಿಕ ಮಾತನಾಡಿದ ಕಾನೂನು ಮಾಧುಸ್ವಾಮಿ, ಗುರುವಾರ ಅಧಿವೇಶನ ಅಂತ್ಯಗೊಳಿಸಲು ತೀರ್ಮಾನ ಮಾಡಿದ್ದೇವೆ ಎಂದರು. ಇನ್ನು ಗ್ರಾಮಪಂಚಾಯ್ತಿ ಚುನಾವಣೆ ಇರೋದ್ರಿಂದ ಚುನಾವಣೆಯಲ್ಲಿ ತೊಡಗಿಸಿಕೊಳ್ಳೋಕೆ ಸದನ ಕಲಾಪ ಮೊಟಕುಗೊಳಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.