ನವದೆಹಲಿ: ಇಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಸಭೆ ನಡೆಯಲಿದೆ. ದೆಹಲಿಯಲ್ಲಿ ಸಂಸ್ಥೆಯ ವಿಷಯ ತಜ್ಞರ ಸಮಿತಿಯ ಸಭೆ ನಡೆಯಲಿದ್ದು, ತಜ್ಞರ ಸಮಿತಿಯಿಂದ ಲಸಿಕೆ ಬಳಕೆಗೆ ಶಿಫಾರಸು ಮಾಡುವ ಸಾಧ್ಯತೆ ಇದೆ.
ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ನೀಡುವ ಬಗ್ಗೆ ಶಿಫಾರಸು ಮಾಡಲಾಗುವುದು. ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಸಮಿತಿ ಶಿಫಾರಸು ಮಾಡಲಿದೆ. ಕೋವಿಡ್ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಲಾಗುತ್ತದೆ.
ಸೀರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್, ಫೈಜರ್ ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಹಾಗೂ ರೋಗನಿರೋಧಕ ಶಕ್ತಿ ವೃದ್ಧಿಸುವ ಬಗ್ಗೆ ಪರಿಶೀಲನೆ ನಡೆಸಿ ಸಿ.ಡಿ.ಎಸ್.ಸಿ.ಒ. ವತಿಯಿಂದ ಡಿಸಿಜಿಐಗೆ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡುವ ಬಗ್ಗೆ ಶಿಫಾರಸು ಮಾಡಲಾಗುವುದು ಎಂದು ಹೇಳಲಾಗಿದೆ.