ಬೆಂಗಳೂರು: ರೈತರಿಗೆ ಮಾರಕವಾಗಿರುವ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಹಿರಿಯ ನಟಿ ಲೀಲಾವತಿ ಆಗ್ರಹಿಸಿದ್ದಾರೆ.
ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿರುವ ನಟಿ ಲೀಲಾವತಿ, ರೈತರು ಕೆಸರು ಗದ್ದೆಯಲ್ಲಿ ಸಂಕಷ್ಟಪಟ್ಟು ಬೆಳೆಗಳನ್ನು ಬೆಳೆಯುತ್ತಾರೆ. ಆತನ ಮನಸ್ಸಿಗೆ ನೋವಾಗುವಂತಹ ಕಾಯ್ದೆ ಜಾರಿಗೆ ತರಬಾರದು. ನಾನು ಓರ್ವ ರೈತಳಾಗಿ ರೈತರ ಹೋರಾಟವನ್ನು ಬೆಂಬಲಿಸುತ್ತೇನೆ. ಎಲ್ಲರೂ ರೈತರ ಪರ ನಿಲ್ಲಬೇಕು ಎಂದು ಹೇಳಿದರು.
ನಿನ್ನೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರೈತ ದೇಶದ ಬೆನ್ನೆಲುಬು, ಆತನ ಕಷ್ಟದ ಜೊತೆ ನಾವು ನಿಲ್ಲುತ್ತೇವೆ. ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದಿದ್ದರು. ಇದರ ಬೆನ್ನಲ್ಲೇ ಇದೀಗ ಸ್ಯಾಂಡಲ್ ವುಡ್ ನ ಹಲವು ತಾರೆಯರು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.