ಬೆಂಗಳೂರು: ನಾಳೆ ಸಾರಿಗೆ ನೌಕರರು ಜಾಥಾ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ.
ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಎಸ್ಆರ್ಟಿಸಿ ಸೇರಿದಂತೆ ವಿವಿಧ ಸಾರಿಗೆ ನೌಕರರು ನಾಳೆ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ ಸಿಟಿ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಸಾರಿಗೆ ನೌಕರರು ಹಾಗೂ ಕುಟುಂಬ ಸದಸ್ಯರಿಂದ ಜಾಥಾ ನಡೆಯಲಿದೆ. ಆದರೆ ಕೆಎಸ್ಆರ್ಟಿಸಿ ನೌಕರರ ಪ್ರಕಾರ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಲ್ಲ ಎನ್ನಲಾಗಿದೆ.
ಇನ್ನು ಬೆಂಗಳೂರಿನಲ್ಲಿ ರೈತ ಸಂಘಟನೆ, ಕಬ್ಬು ಬೆಳೆಗಾರರ ಸಂಘ, ಕಾರ್ಮಿಕ ಸಂಘಟನೆ ಸೇರಿದಂತೆ ಐಕ್ಯ ಸಂಘಟನೆಗಳು ಕೂಡ ನಾಳೆ ಮತ್ತೆ ಪ್ರತಿಭಟನೆ ನಡೆಸಲಿವೆ.