ಬೆಂಗಳೂರು: ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ ಕರೆಯಲಾಗಿದೆ. ಸಿಎಲ್ಪಿ ನಾಯಕ ಸಿದ್ದರಾಮಯ್ಯ ಇಂದು ತುರ್ತು ಸಭೆ ಕರೆದಿದ್ದಾರೆ.
ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಾಗಲು ಸೂಚನೆ ನೀಡಲಾಗಿದೆ. ಗೋಹತ್ಯೆ ನಿಷೇಧ ತಿದ್ದುಪಡಿ ವಿರುದ್ಧ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ
ಇಂದು ಕಲಾಪವನ್ನು ಬಹಿಷ್ಕರಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಮುಂದಿನ ಹೋರಾಟ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಸರ್ಕಾರದ ವಿರುದ್ಧ ನ್ಯಾಯಾಂಗದ ಹೋರಾಟ, ಚುನಾವಣೆ ಆಯೋಗಕ್ಕೆ ದೂರು ನೀಡುವ ಕುರಿತು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.