alex Certify ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಹಿರಿಯ ನಾಗರಿಕರಿಗೆ ಸೂಕ್ತ ಆರೋಗ್ಯ ಯೋಜನೆ ರೂಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಕೊರೋನಾ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಅಗತ್ಯವಾದ ವೈದ್ಯಕೀಯ ನೆರವು ಕಲ್ಪಿಸಲು ಪೂರಕವಾದ ಆರೋಗ್ಯ ಯೋಜನೆ ರೂಪಿಸಬೇಕೆಂದು ಸೂಚಿಸಲಾಗಿದೆ. ಲೆಟ್ಜ್ ಕಿಟ್ ಫೌಂಡೇಶನ್ ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ವಿಮೆ ಸೌಲಭ್ಯ ನೀಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ೆ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಹಿರಿಯ ನಾಗರಿಕರಿಗೆ ಸೂಕ್ತವಾದ ಆರೋಗ್ಯ ಯೋಜನೆ ರೂಪಿಸಲು ಸೂಚನೆ ನೀಡಿದೆ.

ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಆದೇಶಿಸುವುದು ಸಾಧ್ಯವಿಲ್ಲ ಆರೋಗ್ಯಯುತವಾಗಿ ಜೀವಿಸುವುದು ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಿರಿಯ ನಾಗರಿಕರಿಗೆ ಅಗತ್ಯ ವೈದ್ಯಕೀಯ ನೆರವು ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತವಾದ ಆರೋಗ್ಯ ಯೋಜನೆ ಜಾರಿಗೆ ತರಬೇಕೆಂದು ಹೇಳಲಾಗಿದೆ.

ಆರ್ಥಿಕವಾಗಿ ದುರ್ಬಲವಾದ ಹಿರಿಯ ನಾಗರಿಕರಿಗೆ ಚಿಕಿತ್ಸೆ ಪಡೆಯಲು ಕಷ್ಟವಾಗುತ್ತಿದೆ. ಅವರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಉಚಿತವಾಗಿ ಇಲ್ಲವೇ ರಿಯಾಯಿತಿ ಚಿಕಿತ್ಸೆ ನೀಡಲು ಸೂಚಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...