alex Certify BIG NEWS: ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಭೀಫ್ ರಫ್ತು ಹೆಚ್ಚಾಗಿದೆ; ಸಿದ್ದರಾಮಯ್ಯ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಭೀಫ್ ರಫ್ತು ಹೆಚ್ಚಾಗಿದೆ; ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಯ್ದೆಯ ಸಾಧಕ ಬಾದಕಗಳ ಬಗ್ಗೆ ಚರ್ಚೆ ನಡೆಸದೇ ಏಕಾಏಕಿ ಜಾರಿಗೆ ತಂದಿರುವುದು ಸರಿಯಲ್ಲ. ಗೋಹತ್ಯೆ ನಿಷೇಧ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಆದರೆ, ಗೋ ಮಾಂಸ ರಫ್ತಿನ ಬಗ್ಗೆ ನಿಷೇಧ ಹೇರಿಲ್ಲ ಎಂದು ಕಿಡಿಕಾರಿದರು.

ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗೋಹತ್ಯೆ ನಿಷೇಧವನ್ನು ದೇಶಾದ್ಯಂತ ಜಾರಿಗೆ ತರಲು ಸಾಧ್ಯವಿಲ್ಲ ಅಂದ ಮೇಲೆ ಕರ್ನಾಟಕದಲ್ಲಿ ಮಾತ್ರ ಯಾಕೆ ಜಾರಿಗೆ ತರಬೇಕು? ಕೇರಳ, ಗೋವಾ, ಈಶಾನ್ಯ ರಾಜ್ಯಗಳಲ್ಲಿ ಈ ಕಾಯ್ದೆ ಇಲ್ಲ. ದೇಶಕ್ಕೆ ಒಂದು ನೀತಿ, ಕರ್ನಾಟಕ, ಉತ್ತರಪ್ರದೇಶಕ್ಕೆ ಒಂದು ನೀತಿ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಗೋಹತ್ಯೆ ನಿಷೇಧದಿಂದ ಚರ್ಮೋದ್ಯಮದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ವಿಧೇಯಕದ ಬಗ್ಗೆ ಸಮರ್ಪಕ ಚರ್ಚೆ ನಡೆಸದೇ ಜಾರಿಗೆ ತಂದಿರುವುದು ಸರಿಯಲ್ಲ ಎಂದರು.

ಇದೇ ವೇಳೆ ದೇಶದಲ್ಲಿ ಗೋ ಶಾಲೆಗಳನ್ನು ಆರಂಭಿಸುತ್ತೇವೆ. ಗೋಹತ್ಯೆ ನಿಷೇಧಿಸುತ್ತೇವೆ ಎಂದು ಹೇಳುವ ಬಿಜೆಪಿ ನಾಯಕರಲ್ಲಿ ಬಹುತೇಕರು ಗೋ ಮಾಂಸ ರಫ್ತು ಮಾಡುವವರೇ ಇದ್ದಾರೆ. ಮೋದಿಯವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಗೋ ಮಾಂಸ ರಫ್ತು ಪ್ರಮಾಣ ಹೆಚ್ಚಿದೆ ಎಂದು ಆರೋಪಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...