ಹರಳೆಣ್ಣೆ ಕೂದಲಿನ ಆರೋಗ್ಯಕ್ಕೆ ಸಹಕಾರಿ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಹರಳೆಣ್ಣೆಯಿಂದ ನಮ್ಮ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಹರಳೆಣ್ಣೆಯನ್ನು ಈ ಫೇಸ್ ಪ್ಯಾಕ್ ಗಳ ಜೊತೆಗೆ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚುವುದರಿಂದ ನಿಮ್ಮ ಮುಖದ ಸಮಸ್ಯೆಗಳು ನಿವಾರಣೆಯಾಗುತ್ತದೆ.
ಒಂದು ಹಣ್ಣಾದ ಬಾಳೆಹಣ್ಣನ್ನು ಹಿಸುಕಿ ಅದಕ್ಕೆ ½ ಚಮಚ ಜೇನುತುಪ್ಪ ಮತ್ತು 1 ಚಮಚ ಹರಳೆಣ್ಣೆಯನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 30 ನಿಮಿಷ ಬಿಟ್ಟು ವಾಶ್ ಮಾಡಿ. ವಾರಕ್ಕೊಮ್ಮೆಯಾದರೂ ಈ ಫೇಸ್ ಪ್ಯಾಕ್ ಹಚ್ಚಿ.
ಒಂದು ನಿಂಬೆ ಹಣ್ಣಿನ ರಸಕ್ಕೆ 1 ಚಮಚ ಹರಳೆಣ್ಣೆಯನ್ನು ಮಿಕ್ಸ್ ಮಾಡಿ ಮಲಗುವ ಮುನ್ನ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ ರಾತ್ರಿ ಹಾಗೇ ಬಿಟ್ಟು ಬೆಳಿಗ್ಗೆ ವಾಶ್ ಮಾಡಿ. ಇದರಿಂದ ಮುಖದ ಕಲೆಗಳು ಮಾಯವಾಗುತ್ತವೆ.