ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರ ಹೋರಾಟ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ಸಿಬ್ಬಂದಿಗಳು ಮಕ್ಕಳು, ಕುಟುಂಬ ಸಮೇತರಾಗಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಸತ್ಯಾಗ್ರಹದಲ್ಲಿ 300ಕ್ಕೂ ಹೆಚ್ಚು ಸಿಬ್ಬಂದಿಗಳು ಭಾಗವಹಿಸಿದ್ದಾರೆ.
ಒಂದೆಡೆ ಸಾರಿಗೆ ನೌಕರರು ತಮ್ಮ ಪಟ್ಟು ಬದಲಿಸುತ್ತಿಲ್ಲ, ಇನ್ನೊಂದೆಡೆ ಸರ್ಕಾರ ಕೂಡ ತನ್ನ ಜಿದ್ದು ಮುಂದುವರೆಸಿದೆ. ಈ ನಡುವೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರ ಟ್ರೇಡ್ ಯೂನಿಯನ್ ಮುಖಂಡರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಕಾದುನೋಡಬೇಕಿದೆ.