ಬೆಂಗಳೂರು: ನಟಿ ಸಂಜನಾ ಅವರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ಮೌಲ್ವಿಯೊಬ್ಬರ ವಿರುದ್ಧ ಕಾಟನ್ ಪೇಟೆ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.
ಟ್ಯಾನರಿ ರಸ್ತೆಯ ಮೌಲ್ವಿ ವಿರುದ್ಧ ಕಾಟನ್ ಪೇಟೆ ಠಾಣೆ ಪೊಲೀಸರಿಗೆ ವಕೀಲ ಅಮೃತೇಶ್ ಅವರು ದೂರು ನೀಡಿದ್ದಾರೆ. ಪೊಲೀಸರು ದೂರು ಸ್ವೀಕರಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ಡ್ರಗ್ಸ್ ನಂಟಿನ ಆರೋಪದ ಮೇಲೆ ಬಂಧಿತರಾಗಿದ್ದ ಸಂಜನಾ ಜಾಮೀನು ಪಡೆದು ಜೈಲಿಂದ ಹೊರಬಂದಿದ್ದಾರೆ.