ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಸಿಬ್ಬಂದಿ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ.
ಬೆಳಗಾವಿ ಸೇರಿದಂತೆ ಹಲವೆಡೆ ಕೆಎಸ್ಆರ್ಟಿಸಿ ಸಂಚಾರ ಆರಂಭವಾಗಿದೆ. ಬೆಂಗಳೂರು, ಚಿತ್ರದುರ್ಗ ಮೊದಲಾದ ಕಡೆಗಳಲ್ಲಿ ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಬಸ್ ಗಾಗಿ ಕಾಯುವಂತಾಗಿದೆ. ಮುಷ್ಕರ ಮುಂದುವರೆದಿರುವುದರಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಇನ್ನು ಸಾರಿಗೆ ಮುಷ್ಕರದಿಂದ ಅಂತರ ಕಾಯ್ದುಕೊಂಡಿರುವ ಕೆಎಸ್ಸಾರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಕಾರ್ಮಿಕರು ಬಸ್ ಸಂಚಾರ ಆರಂಭಿಸಿದ್ದಾರೆ. ಕೆಲವಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭಿಸಲಾಗಿದೆ.
ಮತ್ತೆ ಕೆಲವು ಕಡೆ ಪ್ರಯಾಣಿಕರು ಖಾಸಗಿ ಬಸ್, ವಾಹನಗಳನ್ನು ಆಶ್ರಯಿಸಿದ್ದು, ಹೆಚ್ಚಿನ ಹಣ ಕೊಟ್ಟು ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ.