ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು ಹೋರಾಟವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ತೀರ್ಮಾನಿಸಿದ್ದಾರೆ.
ಇವತ್ತು ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ. ದೇಶಾದ್ಯಂತ ರೈತರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಹೋರಾಟಕ್ಕೆ ಮಹಿಳೆಯರು ಕೂಡ ಸಾಥ್ ನೀಡಲಿದ್ದಾರೆ. ಸೋಮವಾರ ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ನಾಯಕರು ಹೇಳಿದ್ದಾರೆ.
ಪ್ರತಿಭಟನೆ ತೀವ್ರಗೊಳಿಸುವ ಭಾಗವಾಗಿ ಇವತ್ತು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿದೆ. ಕೃಷಿ ಕಾಯ್ದೆ ರದ್ದು ಮಾಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಲಾಗಿದ್ದು, ರೈತರ ಹೋರಾಟಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬೆಂಬಲ ನೀಡಿದ್ದು ಅವರೂ ಸತ್ಯಾಗ್ರಹದಲ್ಲಿ ಭಾಗಿಯಾಗಲಿದ್ದಾರೆ.