ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ನಂತರ ತೆರಿಗೆ ಹೆಚ್ಚಳವಾಗಲಿದೆ. ಈ ಬಾರಿ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಲಿರುವ ಸದಸ್ಯರು ಪರಿಷ್ಕೃತ ತೆರಿಗೆಯನ್ನು ಸಂಗ್ರಹಿಸುವ ಹೊಣೆಗಾರಿಕೆ ಹೊರಬೇಕಿದೆ.
ವಾರ್ಷಿಕ 600 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಿದ್ದು, 400 ಕೋಟಿ ರೂಪಾಯಿ ಸಂಗ್ರಹವಾಗಿದೆ. 1200 ಕೋಟಿ ರೂಪಾಯಿ ಬಾಕಿ ಇದೆ. ಗ್ರಾಮ ಪಂಚಾಯಿತಿಗಳಲ್ಲಿ ವಿಧಿಸುತ್ತಿರುವ ತೆರಿಗೆ ಪರಿಷ್ಕರಣೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಪರಿಷ್ಕರಣೆ ನಂತರ 200 ಕೋಟಿ ರೂಪಾಯಿ ಹೆಚ್ಚಳದ ನಿರೀಕ್ಷೆ ಇದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ತೆರಿಗೆ ನಿರ್ಧರಣೆಗೆ ಒಳಪಡದ ಭೂಮಿ ಮತ್ತು ಕಟ್ಟಡಗಳ ಮೇಲಿನ ತೆರಿಗೆ ಪರಿಷ್ಕರಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ಗ್ರಾಮ ಪಂಚಾಯತಿಗಳು ಸ್ವಾವಲಂಬಿಗಳಾಗಬೇಕು, ಆಸ್ತಿ ತೆರಿಗೆ ವ್ಯಾಪ್ತಿಯಿಂದ ಅನೇಕ ಆಸ್ತಿಗಳಿದ್ದು, ಅವುಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಅಲ್ಲದೇ, ತೆರಿಗೆ ಸಂಗ್ರಹದಿಂದ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.