ಚೆನ್ನೈ: ತಮಿಳಿನ ಖ್ಯಾತ ಕಿರುತೆರೆ ನಟಿ ವಿ.ಜೆ. ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, 6 ದಿನಗಳ ವಿಚಾರಣೆ ಬಳಿಕ ಚಿತ್ರಾ ಪತಿ ಹೇಮಂತ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಚೆನ್ನೈನ ನಜರೀತ್ ಪೆಟ್ಟೈ ಎಂಬ ಖಾಸಗಿ ಹೋಟೆಲ್ ನಲ್ಲಿ ಡಿಸೆಂಬರ್ 9ರಂದು ಚಿತ್ರಾ ಅವರ ಮೃತದೇಹ ಪತ್ತೆಯಾಗಿತ್ತು. ಇದೀಗ ಈ ಪ್ರಕರಣ ಸಂಬಂಧ ಚಿತ್ರಾ ಪತಿ ಹೇಮಂತ್ ನನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಆತ್ಮಹತ್ಯೆ ಪ್ರಕರಣ ಕುತೂಹಲಕ್ಕೆ ಕಾರಣವಾಗಿದೆ.