alex Certify ಊಟ ಮಾಡಿದ ತಕ್ಷಣ ಈ ಕೆಲಸ ಮಾಡಿದರೆ ಆರೋಗ್ಯ ಕೆಡುತ್ತದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಊಟ ಮಾಡಿದ ತಕ್ಷಣ ಈ ಕೆಲಸ ಮಾಡಿದರೆ ಆರೋಗ್ಯ ಕೆಡುತ್ತದೆ

ಊಟ ಮಾಡಿದ ತಕ್ಷಣ ನಿದ್ರಿಸಬಾರದು ಹಾಗೂ ನೀರು ಕುಡಿಯಬಾರದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಹಾಗೇ ಕೆಲವರಿಗೆ ಊಟ ಮಾಡಿದ ತಕ್ಷಣ ಏನಾದರೂ ತಿನ್ನಬೇಕು ಎಂದೆನಿಸುತ್ತದೆ. ಆದರೆ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾತ್ರ ಮಾಡಲೇಬೇಡಿ.

-ಧೂಮಪಾನ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಎಲ್ಲರಿಗೂ ಗೊತ್ತು. ಆದರೆ ಯಾವುದೇ ಕಾರಣಕ್ಕೂ ಊಟ ಮಾಡಿದ ತಕ್ಷಣ ಧೂಮಪಾನ ಮಾಡಬೇಡಿ. ಇದು ಕರುಳಿನ ಕ್ಯಾನ್ಸರ್ ಗೆ ಕಾರಣವಾಗುತ್ತದೆ.

-ಊಟ ಮಾಡಿದ ತಕ್ಷಣ ಸ್ನಾನ ಮಾಡಬೇಡಿ. ಇದರಿಂದ ರಕ್ತದ ಹರಿವು ಹೆಚ್ಚಾಗಿ ಜೀರ್ಣಕ್ರಿಯೆಗೆ ವಿಳಂಬವಾಗುವ ಸಂಭವವಿದೆ.

-ಊಟದ ನಂತರ ಚಹಾ ಕುಡಿಯುವುದನ್ನು ತಪ್ಪಿಸಿ. ಇದರಲ್ಲಿರುವ ಕೆಫಿನ್ ಅಂಶ ಆರೋಗ್ಯಕ್ಕೆ ಒಳ್ಳೆಯದಲ್ಲ.

-ಊಟದ ನಂತರ ಹಣ್ಣುಗಳನ್ನು ಸೇವಿಸಬಾರದು. ಯಾಕೆಂದರೆ ಹಣ್ಣುಗಳನ್ನು ಜೀರ್ಣಿಸಿಕೊಳ್ಳಲು ವಿಭಿನ್ನ ರೀತಿಯ ಕಿಣ್ವಗಳು ಬೇಕು. ಹಾಗಾಗಿ ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ಒಳ್ಳೆಯದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...