ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನ ವೀಕ್ಷಿಸಲು ದಿನಕ್ಕೆ 30 ಸಾವಿರ ಮಂದಿ ಪ್ರೇಕ್ಷಕರಿಗೆ ಅವಕಾಶ ನೀಡೋದಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಇದರಲ್ಲಿ 2ನೇ ಪಂದ್ಯ ಆಸ್ಟ್ರೇಲಿಯಾದ ಸಾಂಪ್ರದಾಯಿಕ ಬಾಕ್ಸಿಂಗ್ ಡೇ ಪಂದ್ಯವಾಗಿದೆ. ಡಿಸೆಂಬರ್ 26ರಿಂದ ಆರಂಭವಾಗುವ 2ನೇ ಪಂದ್ಯಕ್ಕೆ ಪ್ರೇಕ್ಷಕರ ಸಂಖ್ಯೆಯನ್ನ ಹೆಚ್ಚಿಸಲಾಗಿದೆ.
ಈ ಮೊದಲು ಬಾಕ್ಸಿಂಗ್ ಡೇ ಪಂದ್ಯಕ್ಕಾಗಿ ಕೇವಲ 25 ಸಾವಿರ ಮಂದಿ ಅಭಿಮಾನಿಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಈಗ ಈ ನಿಯಮವನ್ನ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಡಿಲಿಸಿದೆ.