ನವದೆಹಲಿ: ಯುಪಿಎಸ್ಸಿ ಪರೀಕ್ಷೆ ತಪ್ಪಿಸಿಕೊಂಡವರಿಗೆ ಮತ್ತೊಂದು ಚಾನ್ಸ್ ನೀಡಲಾಗುತ್ತದೆ. ಈ ವರ್ಷ ಕೊರೋನಾ ಕಾರಣದಿಂದಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ಪೂರ್ವಭಾವಿ ಪರೀಕ್ಷೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಕುರಿತಾಗಿ ಚಿಂತನೆ ನಡೆದಿದೆ.
ಸುಪ್ರೀಂಕೋರ್ಟಿಗೆ ಕೇಂದ್ರ ಸರ್ಕಾರ ಈ ಕುರಿತು ಮಾಹಿತಿ ನೀಡಿದೆ. ಯುಪಿಎಸ್ಸಿ ಪರೀಕ್ಷೆ ಬರೆಯುವ ಕೊನೆಯ ಅವಕಾಶವನ್ನು ಕೊರೊನಾದಿಂದ ತಪ್ಪಿಸಿಕೊಂಡ ಬಗ್ಗೆ ಆಕಾಂಕ್ಷಿಗಳು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆಯ ವೇಳೆಯಲ್ಲಿ ಕೇಂದ್ರ ಸರ್ಕಾರ ಯುಪಿಎಸ್ಸಿ ಪರೀಕ್ಷೆ ತಪ್ಪಿಸಿಕೊಂಡವರಿಗೆ ಮತ್ತೊಂದು ಅವಕಾಶ ನೀಡುವ ಕುರಿತು ಚಿಂತನೆ ನಡೆದಿದೆ ಎಂದು ತಿಳಿಸಿದೆ.