ಕೊರೊನಾ ಕಾರಣಕ್ಕೆ ಕಳೆದ ಎಂಟು ತಿಂಗಳಿನಿಂದ ಬಂದ್ ಆಗಿರುವ ಶಾಲಾ- ಕಾಲೇಜುಗಳು ಪುನಾರರಂಭಗೊಳ್ಳುತ್ತಿದ್ದು, 2021ರ ಜನವರಿ 1 ರಿಂದ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿ ವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಈ ತರಗತಿಗಳನ್ನು ಪ್ರಾರಂಭಿಸಿ, 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಇತರ ತರಗತಿಗಳನ್ನು ಪ್ರಾರಂಭಿಸುವ ಕುರಿತು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಶಾಲೆಗಳನ್ನು ಮರು ಪ್ರಾರಂಭಿಸುವ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸೂಚಿಸಿದ್ದಾರೆ.