ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.
ಗ್ರಾಮ ಪಂಚಾಯತಿ ಚುನಾವಣೆ ನಡೆಯುವ ಮತ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ, ಖಾಸಗಿ ಶಾಲೆ, ಕಾಲೇಜು, ಅನುದಾನಿತ, ಅನುದಾನರಹಿತ ಶಿಕ್ಷಣ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ಬ್ಯಾಂಕುಗಳಿಗೆ ರಜೆ ನೀಡಲಾಗಿದೆ.
ಅದೇ ರೀತಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರಿ ರಂಗದ ಸಂಘ-ಸಂಸ್ಥೆಗಳಲ್ಲಿನ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಮತದಾರರಿಗೆ ಸೀಮಿತವಾದಂತೆ ವೇತನ ಸಹಿತವಾಗಿ ರಜೆ ನೀಡಲಾಗಿದೆ.
ತುರ್ತು ಸೇವೆಗಳ ನೌಕರರಿಗೆ ರಜೆ ಅನ್ವಯವಾಗುವುದಿಲ್ಲ. ಚುನಾವಣಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಹೇಳಲಾಗಿದೆ.