ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಸಂಸದ ಸೌಮಿತ್ರ ಖಾನ್ ಪತ್ನಿ ಸುಜಾತಾ ಮೊಂಡಲ್ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದರ ಬೆನ್ನಲ್ಲೇ ಬಿಜೆಪಿ ಸಂಸದ ಪತ್ನಿಗೆ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿದ್ಯಮಾನಗಳು ಬಿರುಸು ಪಡೆದುಕೊಂಡಿದ್ದು, ಟಿಎಂಸಿಯ ಹಲವು ನಾಯಕರು ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ಬಿಶನ್ ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸೌಮಿತ್ರ ಖಾನ್ ಪತ್ನಿ ಟಿಎಂಸಿ ಸೇರ್ಪಡೆಯಾಗಿದ್ದು, ಇದು ಪತಿ-ಪತ್ನಿ ನಡುವೆ ಬಿರುಕು ಮೂಡಲು ಕಾರಣವಾಗಿದೆ.
ಪತ್ನಿಯ ರಾಜಕೀಯ ನಿರ್ಧಾರದಿಂದಾಗಿ ಬೇಸರಗೊಂಡಿರುವ ಬಿಜೆಪಿ ಸಂಸದ ವಿಚ್ಛೇದನ ನೀಡಲು ನಿರ್ಧರಿಸಿದ್ದಾರೆ. ಪತ್ನಿ ಸುಜಾತಾ ತನ್ನ ಮಾತು ಕೇಳದೇ ಟಿಎಂಸಿ ಸೇರ್ಪಡೆಯಾಗಿದ್ದಾಳೆ. ಇದರಿಂದ ನಮ್ಮ 10 ವರ್ಷಗಳ ಸಂಬಂಧ ಮುರಿದು ಬಿದ್ದಿದೆ. ಹಾಗಾಗಿ ಡಿವೋರ್ಸ್ ನೀಡುತ್ತಿರುವುದಾಗಿ ತಿಳಿಸಿದ್ದಾರೆ.