ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣೆ ಹಿನ್ನಲೆಯಲ್ಲಿ ಮತದಾನ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ 2 ದಿನ ರಜೆ ನೀಡಲಾಗಿದೆ.
ಇಂದು ಮತ್ತು ಡಿಸೆಂಬರ್ 27 ರಂದು ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದ್ದು, ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ವಿವಿಧ ಸಂಸ್ಥೆ/ಸರ್ಕಾರಿ ನೌಕರರಿಗೆ ಮತದಾನದ ದಿನಾಂಕಗಳಂದು ರಜೆಯನ್ನು ಘೋಷಿಸಲಾಗಿದೆ.
ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್‍ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ ಎಸ್ಟಾಬ್ಲಿಷ್‍ಮೆಂಟ್‍ಗಳ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಮತದಾನದ ದಿನಾಂಕಗಳಂದು ರಜೆಯನ್ನು ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ ಹಾಗೂ ಚುನಾವಣೆ ಘೋಷಣೆಯಾಗದೇ ಇರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಜೆ ಅನ್ವಯವಾಗುವುದಿಲ್ಲ ಎಂದು ಹೇಳಲಾಗಿದೆ.