ನವದೆಹಲಿ: ಸರ್ಕಾರಿ ಉದ್ಯೋಗದ ಸಾಮಾನ್ಯ ವಿಭಾಗ ಎಲ್ಲರಿಗೂ ಮುಕ್ತವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸರ್ಕಾರಿ ಉದ್ಯೋಗದ ಸಾಮಾನ್ಯ ವಿಭಾಗದಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗ ಸೇರಿದಂತೆ ಎಲ್ಲರಿಗೂ ಮುಕ್ತವಾಗಿರುತ್ತದೆ ಎಂದು ಹೇಳಲಾಗಿದೆ.
ಮೀಸಲಾತಿ ಅಡಿ ಬರುವ ಅರ್ಹರಾದ ಅಭ್ಯರ್ಥಿಗಳು ಆ ವಿಭಾಗದ ಬದಲಿಗೆ ಸಾಮಾನ್ಯ ವಿಭಾಗದಲ್ಲಿ ನೌಕರಿ ಪಡೆಯಲು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಅಲ್ಲದೆ, ಮೆರಿಟ್ ಆಧಾರದಲ್ಲಿ ಇದಕ್ಕೆ ಅವಕಾಶ ನೀಡದಿದ್ದರೆ ಅದು ಕೋಮು ಮೀಸಲಾತಿಗೆ ಸಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.