ನವದೆಹಲಿ: ಒಂದು ದೇಶ ಒಂದು ಚುನಾವಣೆಗೆ ಚುನಾವಣಾ ಆಯೋಗ ಸಿದ್ಧವಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಹೇಳಿದ್ದಾರೆ.
ಸಂಸತ್ ಈ ನಿಟ್ಟಿನಲ್ಲಿ ಸೂಕ್ತವಾದ ಶಾಸನ ರಚಿಸಿದಲ್ಲಿ ಒಂದು ದೇಶ ಒಂದು ಚುನಾವಣೆಗೆ ಸಿದ್ಧ ಎಂದು ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಚುನಾವಣಾ ಆಯೋಗ ಒಂದೇ ಈ ಕುರಿತು ನಿರ್ಧರಿಸಲು ಸಾಧ್ಯವಿಲ್ಲ. ಶಾಸನ ರಚನೆಯಾದಲ್ಲಿ ಅದರ ಆಧಾರದ ಮೇಲೆ ಒಂದು ಎಲೆಕ್ಷನ್ ನಡೆಸಲು ಮುನ್ನಡೆಯಬಹುದು. ಮುಂದಿನ ವರ್ಷ 5 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕೊರೋನಾ ಲಸಿಕೆ ಬಂದರೂ ಸವಾಲುಗಳ ನಡುವೆ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.